ತನ್ನದೇ ಕೈಯಲ್ಲಿದ್ದ ರೈಫಲಿನ ಗುಂಡೇಟಿಗೆ ಬಲಿಯಾದ ಡಿ.ಆರ್ ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಶನಿವಾರ ಬೆಳಿಗ್ಗೆ ರಾಜೇಶ್ ಕುಂದರ್ ಬರೆದ ಡೆತ್ ನೋಟ್ ಲಭ್ಯವಾಗಿದ್ದು, ಮೂವರು ಪೋಲಿಸರ ವಿರುದ್ದ ಆತ್ಮಹತ್ಯೆ ಪ್ರಚೋದನಾ ಪ್ರಕರಣ ದಾಖಲಾಗಿದೆ.
ಡಿಎಆರ್ ಎಪಿಸಿ ಉಮೇಶ, ಡಿಎಆರ್ ಎಪಿಸಿ ಅಶ್ಫಕ್, ಗಂಗೊಳ್ಳಿ ಠಾಣಾ ಪಿ.ಎಸ್.ಐ ನಂಜ ನಾಯ್ಕ್ ಹಾಗೂ ಇನ್ನೋರ್ವ ವ್ಯಕ್ತಿಯ ವಿರುದ್ದ ಸೆಕ್ಷನ್ 306 ರ ಅಡಿಯಲ್ಲಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಕ್ರವಾರ ಬೆಳಿಗ್ಗೆ ಕುರ್ಚಿಯಲ್ಲೇ ಕುಳಿತ ಸ್ಥಿತಿಯಲ್ಲಿ ರಾಜೇಶ್ ಮೃತ ದೇಹ ಪತ್ತೆಯಾಗಿತ್ತು.
ಶನಿವಾರ ಬೆಳಿಗ್ಗೆ ರಾಜೇಶ್ ಕುಂದರ್ ಜೊತೆ ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಗಣೇಶ್ ಎಂಬವರು ಎಂದಿನಂತೆ ಕಚೇರಿಗೆ ತೆರಳಿ ತನ್ನ ಬ್ಯಾಗನ್ನು ಪರಿಶೀಲಿಸುತ್ತಿದ್ದಾಗ ನೋಟ್ ಬುಕ್ ನ ಒಂದು ಹಾಳೆ ರಾಜೇಶ್ ಅವರು ಬರೆದ ಡೆತ್ ನೋಟ್ ಪತ್ತೆಯಾಗಿದೆ. ಮೇಲಾಧಿಕಾರಿಗಳಿಗೆ ಈ ಮಾಹಿತಿಯನ್ನು ತಿಳಿಸಿ ನಗರ ಠಾಣೆಗೆ ಡೆತ್ ನೋಟನ್ನು ಹಾಜರು ಪಡಿಸಿದ್ದಾರೆ.
ಮೃತ ಡಿಆರ್ ಹೆಡ್ ಕಾನ್ಸ್ಟೇಬಲ್ ರಾಜೇಶ್ ಅವರು ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದೆ.
ಡೆತ್ ನೋಟನ್ನು ಹ್ಯಾಂಡ್ ರೈಟಿಂಗ್ ತಜ್ಞರಿಗೆ ಪರಿಶೀಲನೆಗೆ ಕಳುಹಿಸಿದ್ದೇವೆ. ರಾಜೇಶ್ ಅವರ ಆತ್ಮಹತ್ಯೆ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ