ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರ ಜೈಲಿಗಾದ್ರೂ ಹಾಕಲಿ ನಾನು ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಚಿವ ಅಶ್ವಥ್ ನಾರಾಯಣ ಅವರು ನನ್ನ ವಿರುದ್ದ ಮಾತನಾಡಿದ್ದಾರೆ. ನನಗೆ ಜೈಲೇ ಶಾಶ್ವತ ಎಂದಿದ್ದಾರೆ. ಆದರೆ ನನ್ನನ್ನು ಯಾವ ಜೈಲಿಗಾದ್ರೂ ಹಾಕಲಿ, ನಾವು ಅವರಿಗೆ ಆಜ್ಞೆ ಮಾಡುವುದಕ್ಕೆ ಆಗಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪರೀಕ್ಷೆ, ನೇಮಕಾತಿ ಎಲ್ಲದರಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಟಿಫಿಕೇಟ್ ನೀಡೋದು, ಪಾಸ್ ಮಾಡೋದು ಇವೆಲ್ಲದರಲ್ಲಿಯೂ ದಂಧೆಯಾಗಿದೆ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯ ಸರ್ಕಾರ ಹಗರಣಗಳನ್ನು ಮುಚ್ಚಿ ಹಾಕುವಂತಹ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಮಾಜಿ ಸಚಿವ ಈಶ್ವರಪ್ಪ ಅಪರಾಧಿಯಲ್ಲ ಎಂದು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಹಗರಣವನ್ನು ಮುಚ್ಚಿ ಹಾಕಲು ಸಣ್ಣಪುಟ್ಟ ಅಧಿಕಾರಿಗಳ ಮೇಲೆ ಆ್ಯಕ್ಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಹಾಗೂ ಪಾದಯಾತ್ರೆ ಚುನಾವಣಾ ಗಿಮಿಕ್ ಎಂದು ಜರಿದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಈ ಹಿಂದೆ ಎಲ್.ಕೆ.ಅಡ್ವಾಣಿ, ಯಡಿಯೂರಪ್ಪ ಅವರು ಮಾಡಿದ ಯಾತ್ರೆಗಳೆಲ್ಲಾ ಗಿಮಿಕ್ ಆಗಿದ್ದವಾ ಎಂದು ಪ್ರಶ್ನಿಸಿದ್ದಾರೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ