ಅಸನಿ ಚಂಡಮಾರುತ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಹ ಮಳೆಯಾಗಬಹುದು ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಂಗಳವಾರ ವಿವಿಧ ಜಿಲ್ಲೆಗಳಲ್ಲೆ ಯೊಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಸನಿ ಚಂಡಮಾರುತ ಆಂಧ್ರ ಪ್ರದೇಶದ ವಿಶಾಖಪಟ್ಟಣ, ಒಡಿಶಾದ ಪುರಿಯತ್ತ ಚಲಿಸುತ್ತಿದೆ. ಇದರ ಪರಿಣಾಮ ಮೇ 10 ರಿಂದ 12ರ ತನಕ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ.
ಎಲ್ಲೆಲ್ಲಿ ಅಲರ್ಟ್ ಭಾರತೀಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಉಳಿದಂತೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ