ಉಡುಪಿ: ತಾನು ವಿಧ್ಯಾಭ್ಯಾಸ ಮಾಡಿದ ತಕ್ಕಂತೆ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದ ಎಂ.ಬಿ.ಎ ಪದವಿಧರೆ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವತಿ ಉಪ್ಪಿನಂಗಡಿಯ 23 ವರ್ಷದ ಸಹನಾ ಮನನೊಂದು ಆತ್ಮಹತ್ಯೆಗೆ ಶರಣಾದ ಯುವತಿ.
ಇನ್ನು ಘಟನೆಗೆ ಸಂಬಂಧಿಸಿದಂತೆ ಒಂದುವರೆ ವರ್ಷದ ಹಿಂದೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂ.ಬಿ.ಎ ಮುಗಿಸಿದ್ದ ಸಹನಾ ತನ್ನ ವಿದ್ಯಾರ್ಹತೆಗೆ ತಕ್ಕ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರು. ಆದರೆ ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ. ಇದರಿಂದ ತುಂಬ ಬೇಸರಗೊಂಡಿದ್ದ ಸಹನಾ ಆತ್ಮಹತ್ಯೆಯ ದುಡುಕಿನ ನಿರ್ಧಾರ ಮಾಡಿದ್ದಾಳೆ.
ಶಿರ್ವ ಸಮಿಪದ ಕಟ್ಟಿಂಗೇರಿ ಗ್ರಾಮಕ್ಕೆ ಏ.30 ರಂದು ತನ್ನ ಸಹೋದರಿ ಮನೆಗೆ ಬಂದಿದ್ದ ಸಹನಾ ಅಲ್ಲಿಯೇ ರಾತ್ರಿ ವಿಷ ಸೇವಿಸಿದ್ದಾಳೆ.
ವಿಷು ಸೇವಿಸಿದ ಬಳಿಕ ಬೆಳಿಗ್ಗೆ ವಿಪರೀತ ವಾಂತಿ ಮಾಡಿಕೊಳ್ಳುತ್ತಿದ್ದ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತದ ನಂತರ ಚಿಂತಾಜನಕ ಸ್ಥಿತಿ ತಲುಪಿದ್ದ ಸಹನಾಳನ್ನು ಮೇ.7ರಂದು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಟ್ಟು ಮೂರು ಆಸ್ಪತ್ರೆಯಲ್ಲಿ 10 ದಿನಗಳ ಕಾಲ ಚಿಕಿತ್ಸೆ ಕೊಡಲಾಗಿತ್ತು.
ಆದರೆ ಎಲ್ಲಿಯೂ ಕೂಡ ಆರೋಗ್ಯದಲ್ಲಿ ಚೇತರಿಕೆ ಕಂಡುಬರದೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾಳೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ