ಅಸಾನಿ ಚಂಡಮಾರುತದ ಪ್ರಭಾವದಿಂದ ಉಡುಪಿ ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಗಿದೆ. ಕುಂದಾಪುರ, ಬೈಂದೂರು, ಕಾರ್ಕಳ, ಬ್ರಹ್ಮಾವರ, ಹೆಬ್ರಿ, ಕಾಪು ಹಾಗೂ ಉಡುಪಿ ತಾಲ್ಲೂಕುಗಳಲ್ಲಿ ಬಿರುಸಿನ ಮಳೆಯಾಗಿದೆ.
ಮುಂಜಾನೆಯಿಂದ ಮೋಡ ಕವಿದ ವಾತಾವರಣದ ಕಂಡುಬಂದಿದ್ದು, ಬಳಿಕ ಜಿಟಿಜಿಟಿ ಮಳೆ ಬಿರುಸು ಪಡೆದು ಕೊಂಡಿತು.
ಕೊಲ್ಲೂರು, ಸಿದ್ಧಾಪುರ ಸೇರಿದಂತೆ ಕೆಲವೆಡೆ ವಿಪರೀತ ಮಳೆಯಾಗಿ ರುವ ಬಗ್ಗೆ ವರದಿಯಾಗಿದೆ. ಉಡುಪಿ ನಗರ ಸೇರಿದಂತೆ ಹಲವು ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿ, ಜನ ಪರದಾಡುವಂತಾಗಿದೆ.
ಚಂಡಮಾರುತ ಪ್ರಭಾವದಿಂದ ಮಲ್ಪೆಯ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ದೈತ್ಯ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಮೇ 13ರವರೆಗೆ ಬಿರುಸಿನ ಮಳೆ ಸುರಿಯಲಿದ್ದು, ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ