ಉಡುಪಿ : ಉಪ್ಪಿನಂಗಡಿಯ ಯುವತಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ .
ಎಂ.ಬಿ.ಎ ಪದವೀಧರೆಯಾದ ಸಹನಾ ಕೆಲಸ ಸಿಗದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದರು , ಈ ಹಿನ್ನೆಲೆ ನಿರುದ್ಯೋಗ ಸಮಸ್ಯೆ ನಿವಾರಿಸದ ರಾಜ್ಯ ಕೇಂದ್ರ ಸರಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ .
ಉಪ್ಪಿನಂಗಡಿಯ ಸಹನಾ ಉಡುಪಿಯ ಕಾಪುವಿನ ಕಟ್ಟಿಂಗೇರಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು , ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮುಗಿಸಿದ್ದ ಸಹನಾ , ಉದ್ಯೋಗಕ್ಕಾಗಿ ಅಲೆದಾಡಿದ್ದಳು . ಆದರೆ , ಎಲ್ಲಿಯೂ ತನ್ನ ಅರ್ಹತೆಗೆ ತಕ್ಕ ಕೆಲಸ ಸಿಗದಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ