ಉದ್ಯೋಗ ಸಿಗದ ಕಾರಣಕ್ಕೆ ಮನನೊಂದು ಈಚೆಗೆ ಶಿರ್ವದಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಂಬಿಎ ಪದವೀಧರೆ ಸಹನಾ ಸಾವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಆರೋಪಿಸಿದರು.
ಗುರುವಾರ ಬನ್ನಂಜೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಜಿಲ್ಲಾ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು. ಉದ್ಯೋಗ ಸೃಷ್ಟಿಯ ಬದಲಾಗಿ 2 ಕೋಟಿ ಮಂದಿ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ ಎಂದು ಟೀಕಿಸಿದರು.
40 ಪರ್ಸೆಂಟ್ ಕಮಿಷನ್ ಹೊರತುಪಡಿಸಿ ಬಿಜೆಪಿ ಸರ್ಕಾರಕ್ಕೆ ರಾಜ್ಯದ ಜನರ ನೋವು, ಸಮಸ್ಯೆಗಳು ಕಾಣುತ್ತಿಲ್ಲ.ಮೃತ ಯುವತಿಯ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದರೆ ಯುವ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದ ನಲಪಾಡ್ ಯುವ ಕಾಂಗ್ರೆಸ್‌ನಿಂದ ಮೃತ ಯುವತಿಯ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ