ಎಲ್ ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.
ಮಂಗಳೂರಿನಿಂದ ಉಡುಪಿಗೆ ಎಚ್‌ಪಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ನ್ನು ಚಾಲಕ ರಾತ್ರಿ ಹೆಜಮಾಡಿ ಟೋಲ್ ಪ್ಲಾಜಾ ಬಳಿ ವಾಹನ ನಿಲ್ಲಿಸಿ ಚಹಾ ಕುಡಿಯಲು ಸಮೀಪದ ಸ್ಟಾಲ್‌ಗೆ ಹೋಗಿದ್ದು, ಈ ವೇಳೆ ಚಾಲಕನ ಸೀಟಿನ ಕೆಳಗೆ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಸಮೀಪದ ಸಣ್ಣಪುಟ್ಟ ಅಂಗಡಿಗಳ ಎಲ್ಲಾ ಸಿಬ್ಬಂದಿ, ಟೋಲ್ ಪ್ಲಾಜಾ ಸಿಬ್ಬಂದಿ ಮತ್ತು ಸ್ಥಳೀಯರು ಬಕೆಟ್‌ಗಳಲ್ಲಿ ನೀರು ಸುರಿದು ಬೆಂಕಿಯನ್ನು ನಂದಿಸಿದ್ದಾರೆ. ಟ್ರಕ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ