ಬೆಳ್ತಂಗಡಿ : ಸಂಘದ ಹಿರಿಯರು ಸೂಚಿಸಿದ್ರೆ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೇನೆ . ಆದರೆ ಆಗ ಧೈರ್ಯದಿಂದ ಹೇಳುತ್ತೇನೆ ನನಗೆ ಮುಸ್ಲಿಮರ ಮತ ಬೇಡ , ನನಗೆ ಕೇವಲ ಹಿಂದೂಗಳ ಓಟ್ ಅಷ್ಟೇ ಸಾಕು ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ತಿಳಿಸಿದ್ದಾರೆ
. ಬೆಳ್ತಂಗಡಿಯ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು ಮುಸ್ಲಿಮರ ಮತ ಬೇಡ , ಹಿಂದೂಗಳ ಮತಗಳಷ್ಟೇ ಸಾಕು ಯಾಕೆಂದರೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಬೇಕು . ಕಾಶಿಯಲ್ಲಿ ವಿಶ್ವನಾಥ ದೇವರ ಮಂದಿರ ನಿರ್ಮಾಣ ಆಗಬೇಕು . ದತ್ತ ಪೀಠದಲ್ಲಿ ದತ್ತಾತ್ರೇಯರ ಪೀಠ ನಿರ್ಮಾಣ ಆಗಬೇಕು . ಹೀಗಾಗಿ ಬಹಳ ಧೈರ್ಯದಿಂದ ಹೇಳೇನೆ ನನಗೆ ಮುಸ್ಲಿಮರ ಮತಗಳು ಬೇಡ ಎಂದರು . ಸದ್ಯ ಈ ಭಾಷಣದ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು , ಚರ್ಚೆಗೆ ಕಾರಣವಾಗಿದೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ