Slider

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ 19-5-2022


 ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫ‌ಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಹೊರ ಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ.


ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.



145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.


ಒಟ್ಟು 40,061 ಮಂದಿ ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಪಾಸಾಗಿದ್ದಾರೆ. ಅವರಲ್ಲಿ 35,931 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಗ್ರೇಸ್ ಮಾರ್ಕ್ ಪಡೆದಿದ್ದಾರೆ. (ಮೂರು ಅಂಕಗಳನ್ನು ಗ್ರೇಸ್ ರೂಪದಲ್ಲಿ ನೀಡಲಾಗುತ್ತದೆ)



ಜಿಲ್ಲಾವರು ಫಲಿತಾಂಶದಲ್ಲಿ ಗ್ರೇಡ್ ವ್ಯವಸ್ಥೆಯನ್ನು ತರಲಾಗಿದ್ದು, ಎ ಗ್ರೇಡ್ ನಲ್ಲಿ 32 ಜಿಲ್ಲೆಗಳಿದ್ದರೆ, 2 ಜಿಲ್ಲೆಗಳು ಬಿ ಗ್ರೇಡ್ ಪಡೆದಿವೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ.


ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಫ‌ಲಿತಾಂಶ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಬಳಿಕ ವಿದ್ಯಾರ್ಥಿಗಳಿಗೆ ಮಂಡಳಿ ವೆಬ್‌ಸೈಟ್‌ನಲ್ಲಿ ಫ‌ಲಿತಾಂಶ ಲಭ್ಯವಾಗಿದೆ. ವಿದ್ಯಾ ರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ಗ‌ಳಿಗೂ ಫ‌ಲಿತಾಂಶದ ಸಂದೇಶ ಬರಲಿದೆ.


ಫ‌ಲಿತಾಂಶವು http://kseeb.kar.nic.in , http://sslc.karnataka.gov.in, http://karresults.nic.in ವೆಬ್‌ಸೈಟ್‌ ಗಳಲ್ಲಿ ಮಧ್ಯಾಹ್ನ 1 ಗಂಟೆಯಿಂದ ವೇಳೆಗೆ ಲಭ್ಯವಿದೆ.


ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆ 27 ಮೇಯಿಂದ ಜೂನ್ 4 ರ ವರೆಗೆ ನಡೆಯಲಿದೆ. ಮೇ 20 ರಿಂದ ಆನ್ಲೈನ್ ನಲ್ಲಿ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದಾಗಿದೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo