ಉಡುಪಿ : ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ಭೀತಿ ಹೆಚ್ಚುತ್ತಿದೆ . ಕುಂದಾಪುರ , ಬೈಂದೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗುತ್ತಿವೆ . ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಗ್ರಾಮಾಂತರ ಭಾಗದ ಶಾಲೆಗಳಿಗೆ ರಜೆ ನೀಡಲಾಗಿದೆ .
ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವ ಗ್ರಾಮಗಳಲ್ಲಿ ಹತ್ತು ದಿನಗಳ ಕಾಲ ಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ . ಜಡ್ಕಲ್ ಮದ್ದೂರು ಭಾಗದ ಶಾಲೆಗಳಿಗೆ ರಜೆ ಆದೇಶ ಜಾರಿಯಾಗಲಿದೆ .
ಉಡುಪಿ ಜಿಲ್ಲೆ ಯಲ್ಲಿ 152 ಡೆಂಗ್ಯೂ ಪ್ರಕರಣ ಖಚಿತಗೊಂಡಿದೆ.ಈ ವರೆಗೆ 2000 ಕ್ಕೂ ಅಧಿಕ ಶಂಕಿತ ಪ್ರಕರಣಗಳು ಪತ್ತೆಯಾಗಿದ್ದು ಪರೀಕ್ಷೆಗೆ ಒಳಪಡಿಸಲಾಗಿದೆ . ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಡೆಂಗ್ಯೂ ರೋಗ ಮಿತಿಮೀರಿದೆ . ಬೈಂದೂರು ತಾಲೂಕಿನ ಜಡ್ಕಲ್ ಗ್ರಾ.ಪಂ. ವ್ಯಾಪ್ತಿಯ ಮುದೂರು , ಉದಯನಗರ , ಬೀಸಿನಪಾರೆ , ಮುಂತಾದೆಡೆ ಡೆಂಗ್ಯೂ ಕಾಣಿಸಿಕೊಂಡಿದೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ