ಉಳ್ಳಾಲ: ಮನೆಗೆ ನುಗ್ಗಿ ಚಿನ್ನಾಭರಣ ಕದ್ದು ಪರಾರಿಯಾಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮದನಿ ನಗರ ನಿವಾಸಿ ಕಬೀರ್ ತಸ್ಲಿಂ (25) ಎಂದು ಗುರುತಿಸಲಾಗಿದೆ. ಈತ ಉಳ್ಳಾಲದ ಮುನ್ನೂರು ಗ್ರಾಮ ಮದನಿ ನಗರದ ಅಬ್ದುಲ್ ರಶೀದ್ ಎಂಬವರ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ.
ಆರೋಪಿ ಕಬೀರ್ ತಸ್ಲಿಂ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದನು. ಆರೋಪಿಗೆ ನ್ಯಾಯಾಲಯದ ವಾರೆಂಟ್ ಜಾರಿಯಾದ ಹಿನ್ನೆಲೆ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಬಳಿಕ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕಳ್ಳತನದ ಕೃತ್ಯ ಬೆಳಕಿಗೆ ಬಂದಿದ್ದು, ಕಳವುಗೈದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ