ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹುಟ್ಟು ಹಬ್ಬಕ್ಕೆ ಕ್ಷೀರಾಭಿಷೇಕ ಮಾಡಿಸಿಕೊಂಡಿದ್ದಾರೆ.ಮಂಡ್ಯ ಜಿಲ್ಲೆಯಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ಕ್ಷೀರಾಭಿಷೇಕ ನಡೆದಿದೆ.
ಕೇಕ್ ಕತ್ತರಿಸಿ ಹಾರ ಹಾಕಿ ಹೆಗಲ ಮೇಲೆ ಹೊತ್ತು ಬೆಂಬಲಿಗರು ಹಾಲಿನ ಅಭಿಷೇಕ ಮಾಡಿದ್ದಾರೆ.
ಅರಕೆರೆ ಗ್ರಾಮಸ್ಥರು ಗ್ರಾಮದಾದ್ಯಂತ ಮಾಜಿ ಶಾಸಕರ ಬರ್ತ್ ಡೇ ಆಚರಣೆಯನ್ನು ಬಲು ಜೋರಾಗಿ ನಡೆಸಿದ್ದಾರೆ.
2013ರಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿದ್ದ ರಮೇಶ್ ಬಂಡಿಸಿದ್ದೇಗೌಡ 2018 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ