Slider


ಅಂತಾರಾಷ್ಟ್ರೀಯ ಕಬ್ಬಡ್ಡಿ ಆಟಗಾರ ಇನ್ನಿಲ್ಲ21-5-2022

 


ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ವಿಧಿವಶರಾಗಿದ್ದಾರೆ.



ಬಂಟ್ವಾಳದ ಮಾಣಿಯ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಪ್ರಸ್ತುತ ಬ್ಯಾಂಕ್ ಆಫ್ ಬರೋಡಾದ ಸುರತ್ಕಲ್ ಶಾಖೆಯಲ್ಲಿ ಉಪ ಪ್ರಬಂಧಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ಉಪಾಧ್ಯಕ್ಷರಾಗಿದ್ದರು.



ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದ ಉದಯ ಚೌಟ ಅವರು, 2004ರಲ್ಲಿ ಭಾರತ ಮತ್ತು ಬಾಂಗ್ಲಾ ನಡುವಿನ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನ ಗೆಲ್ಲುವ ಮೂಲಕ ಚಿನ್ನದ ಪದಕವನ್ನು ಗಳಿಸಿದ್ದರು. ಅಷ್ಟೇ ಅಲ್ಲದೆ 2007ರ ಕಬಡ್ಡಿ ವಿಶ್ವಕಪ್ ಸರಣಿಯಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಹೊರಹೊಮ್ಮಿದ್ದರು. ಇವರ ಕ್ರೀಡಾ ಸಾಧನೆಯನ್ನು ಗುರುತಿಸಿ ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದಾರೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo