ಬೈಂದೂರು: ಮೀನುಗಾರಿಕೆ ಮಾಡುತ್ತಿದ್ದ ವೇಳೆ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾದ ಘಟನೆ ಬೈಂದೂರಿನ ಪಡುವರಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತ ಮೀನುಗಾರನನ್ನು ಸುಂದರ ಎಂದು ಗುರುತಿಸಲಾಗಿದೆ. ಸುಂದರ ಪಡುವರಿ ಗ್ರಾಮದ ಸುಮನಾವತಿ ಹೊಳೆಯಲ್ಲಿ ಪಾತಿ ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಹೊಳೆಯ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಇದೀಗ ಅವರು ಪಡುವರಿ ಗ್ರಾಮದ ಸೇನೇಶ್ವರ ದೇವಸ್ಥಾನದ ಬಳಿಯ ಅರಬ್ಬಿ ಸಮುದ್ರ ತೀರದಲ್ಲಿನ ಬಂಡೆಗಳ ಮಧ್ಯೆ ಮೃತ ದೇಹವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ