ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿ ಹೈಕಮಾಂಡ್‌ಗೆ ಶಿಫಾರಸ್ಸು ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್‌ಗೆ 100ಕ್ಕೂ ಅಧಿಕ ಟಿಕೆಟ್ ಆಕಾಂಕ್ಷಿಗಳಿದ್ದು, ಅವರೆಲ್ಲರ ಹೆಸರನ್ನ ಪಟ್ಟಿ ಮಾಡಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಇನ್ನು ಈ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ವಿಧಾನ ಪರಿಷತ್‌ಗೆ ಲಭ್ಯವಿರುವುದು ಕೇವಲ ಎರಡು ಸ್ಥಾನಗಳು. ಆದ್ದರಿಂದ ಎಲ್ಲಾ ವರ್ಗದ ನಾಯಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಹೆಸರುನ್ನು ಶಿಫಾರಸ್ಸು ಮಾಡಿದ್ದೇವೆ. ರಾಜ್ಯಸಭೆ ಟಿಕೆಟ್ ವಿಚಾರವಾಗಿ ಇದುವರೆಗೂ ಯಾವುದೇ ಚರ್ಚೆ ನಡೆದಿಲ್ಲ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ