ಬಂಟ್ವಾಳ: ವೃದ್ಧೆಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳದ ಪಾಣೆಮಂಗಳೂರು ಬಳಿಯ ಗೂಡಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವೃದ್ಧೆಯನ್ನು ಬಂಟ್ವಾಳ ತ್ಯಾಗರಾಜನಗರದ ಸವಿತಾ ಭಟ್ (67) ಎಂದು ಗುರುತಿಸಲಾಗಿದೆ. ಅವರು ಗೂಡಿನಬಳಿ ಹಳೆ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದು, ತಕ್ಷಣ ಸ್ಥಳೀಯ ಈಜುಪಟುಗಳು ಧಾವಿಸಿ ಸವಿತಾ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಸವಿತಾ ಅವರು ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ