ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಪಕ್ಷದ 3ನೇ ಅಭ್ಯರ್ಥಿಯಾಗಿ ಹೋಟೆಲ್ ಉದ್ಯಮಿ ಉಡುಪಿಯ ಪ್ರಕಾಶ್ ಶೆಟ್ಟಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ.
ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಲುವಾಗಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಸಿಎಂ ಬೊಮ್ಮಾಯಿ ಶನಿವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ 3ನೇ ಅಭ್ಯರ್ಥಿ ಆಯ್ಕೆ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದ್ದು, ಉದ್ಯಮಿ ಪ್ರಕಾಶ್ ಶೆಟ್ಟಿ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಚರ್ಚೆ ನಡೆದಿದೆ. ಇನ್ನು ಈ ಬಗ್ಗೆ ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.
ಈಗಾಗಲೇ ಹಾಲಿ ಸದಸ್ಯರಾದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ. ರಾಮಮೂರ್ತಿ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ