Slider

ದಕ್ಷಿಣ ಕನ್ನಡ:-ಮರಳುಗಾರಿಕೆ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಆದೇಶ 23-5-2022

 


ಮಂಗಳೂರು : ಚೆನ್ನೈನ ರಾಷ್ಟ್ರೀಯ ಹಸಿರು ಪೀಠ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಕರಾವಳಿ ನಿಯಂತ್ರಣ ವಲಯ ( ಸಿಆರ್‌ಝಡ್ ) ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ದ.ಕ. ಜಿಲ್ಲೆಯ ಸಿಆರ್‌ಝಡ್ ವ್ಯಾಪ್ತಿಯ ಮರಳುಗಾರಿಕೆಯನ್ನು ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಡಾ . ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ .



 ನೇತ್ರಾವತಿ ಮತ್ತು ಫಲ್ಗುಣಿ ನದಿಗಳ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಗುರುತಿಸಲಾದ 14 ಮರಳು ದಿಬ್ಬಗಳನ್ನು ತೆರವುಗೊಳಿಸಬೇಕು . ಮರಳು ಸಾಗಾಣಿಕೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು . ಮರಳು ತೆಗೆಯಲು ಬಳಸುವ ದೋಣಿಗಳು ಮತ್ತು ಮರಳು ಸಾಗಾಟದ ವಾಹನಗಳನ್ನು ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ . ಸಿಆರ್‌ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಯನ್ನು ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ಪೀಠಕ್ಕೆ ಪರಿಸರವಾದಿ ಗಳು ನೀಡಿದ್ದ ದೂರಿನ ವಿಚಾರಣೆ ನಡೆಸಿದ್ದ ಪೀಠವು ಸಿಆರ್‌ಝಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು ಅನುಸರಿಸುತ್ತಿರುವ ವಿಧಾನಕ್ಕೆ ಅಸಮ್ಮತಿಸಿ ವ್ಯಕ್ತಪಡಿಸಿತ್ತು . ಅಲ್ಲದೆ ತಕ್ಷಣ ಮರಳುಗಾರಿಕೆ ನಿಲ್ಲಿಸಬೇಕು ಮತ್ತು ಈ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಲು 7 ಮಂದಿ ಸದಸ್ಯರ ಸಮಿತಿಗೆ ಮೇ 18 ರಂದು ನಿರ್ದೇಶನ ನೀಡಿತ್ತು . ಅದರಂತೆ ದ.ಕ.ಜಿಲ್ಲೆಯ ಸಿಆರ್‌ಝಡ್ ವ್ಯಾಪ್ತಿಯ ಮರಳುಗಾರಿಕೆಯನ್ನು ಸ್ಥಗಿತಗೊಳಿಸಲು ಆದೇಶಿಸಲಾಗಿದೆ .



ಜಿಲ್ಲೆಯ ಸಿಆರ್‌ಝಡ್ ಪ್ರತಿ ಸರಕಾರದ ಮಾರ್ಗಸೂಚಿಯನ್ವಯ ಪ್ರದೇಶದಲ್ಲಿ 200 ಸಾಂಪ್ರದಾಯಿಕ ಮರಳು ತೆಗೆಯುವ ವ್ಯಕ್ತಿ / ಸಮುದಾಯದವರನ್ನು ಗುರುತಿಸಿ ಮರಳು ತೆಗೆಯಲು ಈವರೆಗೆ 148 ತಾತ್ಕಾಲಿಕ ಪರವಾನಗಿಯನ್ನು ನೀಡಲಾಗಿತ್ತು . ಅತಿ ಸೂಕ್ಷ್ಮ ಪ್ರದೇಶವಾಗಿರುವ ಸಿಆರ್‌ಝಡ್‌ನಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು . ಸಾಂಪ್ರದಾಯಿಕ ಮೀನುಗಾರರು ಕೂಡ ಈ ಮರಳುಗಾರಿಕೆಯನ್ನು ವಿರೋಧಿಸಿದ್ದರು . ಇದೀಗ ಮರಳುಗಾರಿಕೆ ನಿಲ್ಲಿಸಲು ಹಸಿರು ಪೀಠವೇ ಆದೇಶಿಸಿದ ಕಾರಣ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿವೆ .






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo