Slider


ಉಡುಪಿ:- ಮರಳು ಸಾಗಾಟ, ಮರಳು ದಿಬ್ಬಗಳ ತೆರವು ಸಂಪೂರ್ಣ ನಿಷೇಧ 23-5-2022

 


ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವುದನ್ನು ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದ್ದಾರೆ.



ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬಂಧ 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿತ್ತು.

ಅವುಗಳಲ್ಲಿ ಕುಂದಾಪುರ ತಾಲೂಕಿ ನಲ್ಲಿ 4 ಮರಳು ದಿಬ್ಬಗಳನ್ನು ತೆರವುಗೊಳಿಸಲು ವಿತರಿಸಲಾದ 39 ತಾತ್ಕಾಲಿಕ ಮರಳು ಪರವಾನಿಗೆ ಸಂಬಂಧಿಸಿದಂತೆ ಕೆಎಸ್‌ಸಿಝಡ್‌ಎಂಎನಿಂದ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿ ಮಾರ್ಚ್‌ 29ಕ್ಕೆ ಮುಕ್ತಾಯಗೊಂಡಿದ್ದು, ಆ ಎಲ್ಲ ಪರವಾನಿಗೆಗಳನ್ನು ಈಗಾಗಲೇ ತಡೆಹಿಡಿದು ಸ್ಥಗಿತಗೊಳಿಸಲಾಗಿದೆ.



ಉಡುಪಿ ಮತ್ತು ಬ್ರಹ್ಮಾವರ ತಾಲೂಕಿನ 19 ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ವಿತರಿಸಲಾದ 122 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬಂಧ ಕೆಎಸ್‌ಸಿಝಡ್‌ಎಂಎನಿಂದ ನೀಡಲಾದ ನಿರಾಕ್ಷೇಪಣ ಪತ್ರದ ಅವಧಿಯು ಆಗಸ್ಟ್‌ 22ರ ವರೆಗೆ ಇರಲಿದೆ ಎಂದು ಡಿಸಿ ತಿಳಿಸಿದ್ದಾರೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo