ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದ ಬೆನ್ನಲ್ಲೇ ಕೇರಳ, ಒಡಿಶಾ, ಮಹಾರಾಷ್ಟ್ರದಲ್ಲಿ ತೆರಿಗೆ ಇಳಿಕೆ ಮಾಡಲಾಗಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು 9.5 ರೂ., ಡೀಸೆಲ್ ಬೆಲೆಯನ್ನು 8 ರೂ.ನಷ್ಟು ಕಡಿಮೆ ಮಾಡಿದ್ದು, ಜನಸಾಮಾನ್ಯರಿಗೆ ಅನುಕೂಲವಾಗಿದೆ. ಇದೇ ರೀತಿ ರಾಜ್ಯದಲ್ಲಿ ತೆರಿಗೆ ಕಡಿಮೆ ಮಾಡಿ ಹೊರೆ ಇಳಿಸಬೇಕೆಂಬ ಅಭಿಪ್ರಾಯ ಕೇಳಿಬಂದಿದೆ.
ಇದಕ್ಕೆ ಪೂರಕವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ ತೈಲ ಬೆಲೆ ಕಡಿಮೆ ಮಾಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೂಡ ತೆರಿಗೆ ಕಡಿತಗೊಳಿಸಿದ್ದು, ಈ ಬಾರಿ ಕೂಡ ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತಗೊಳಿಸುವ ಸಾಧ್ಯತೆ ಇದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದಾವೋಸ್ ಪ್ರವಾಸದಿಂದ ವಾಪಸಾದ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ