ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲದ ಸಮೀಪ ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಸಂಭವಿಸಿದೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸಾವನ್ನಪ್ಪಿದ ಯುವಕ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕೊಟೇಶ್ವರ ನಿವಾಸಿ ಶೋಧನ್ ಶೆಟ್ಟಿ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಯುವಕ ಆಡ್ರಿನ್ ವಾಸ್ ಎಂದು ತಿಳಿಯಲಾಗಿದೆ.
ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಉಡುಪಿ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪಿದ್ದು ಮತ್ತೋರ್ವ ಗಾಯಗೊಂಡ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇನ್ನು ಘಟನೆಯ ದೃಶ್ಯಾವಳಿ ಸಮೀಪದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ