Slider

ಮಂಗಳೂರು:-ಮತ್ತೆ ಶುರುವಾದ ಹಿಜಾಬ್ ವಿವಾದ26-5-2022


 ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಬರುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಬೃಹತ್​ ಪ್ರತಿಭಟನೆ ನಡೆಸಿದರು.

ಹಿಜಾಬ್​ಗೆ ನಿರ್ಬಂಧ ಇದ್ದರೂ ವಿದ್ಯಾರ್ಥಿನಿಯರು ಧರಿಸಿಕೊಂಡೇ ಬರುತ್ತಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ದೂರಿದರು.



ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ. ನಿಯಮದಂತೆ ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ. ಆದರೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಆದ್ದರಿಂದ ಹಿಜಾಬ್ ವಿರುದ್ಧ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.



ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಪ್ರಾಂಶುಪಾಲರು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಆದರೆ, ಅದು ಸಫಲವಾಗಲಿಲ್ಲ. ತಕ್ಷಣದಿಂದಲೇ ಹಿಜಾಬ್ ಧರಿಸಲು ಅವಕಾಶ ನೀಡಬಾರದು ಮತ್ತು ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸದ ವಿದ್ಯಾರ್ಥಿ ಸಂಘದ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಪಟ್ಟು ಹಿಡಿದಿದ್ದಾರೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo