ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೇ 31 ರಂದು ನಿವೃತ್ತ ಆದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.
.ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.
1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಹಾಲಿ ರಾಜ್ಯಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್ ವರೆಗೆ ಅಧಿಕಾರವಧಿ ಇರಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ