ಬೆಳ್ತಂಗಡಿ ಮೇ 27: ವರನ ಕೈ ತಾಗಿದ್ದಕ್ಕೆ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬೆಳ್ತಂಗಡಿಯ ನಾರಾವಿಯಲ್ಲಿ ನಡೆದಿದೆ. ವರ ಬೆಳ್ತಂಗಡಿ ತಾಲೂಕಿನವನಾಗಿದ್ದು, ಈತನಿಗೆ ಮೂಡುಕೊಣಾಜೆ ಮೂಲದ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಅಂತೆಯೇ ಇಬ್ಬರ ಮದುವೆ ನಾರಾವಿ ದೇವಸ್ಥಾನದ ಸಮೀಪದಲ್ಲಿರುವ ಸಬಾಭವನದಲ್ಲಿ ನಡೆಯುತ್ತಿತ್ತು.
ಈ ಸಂದರ್ಭ ಮದುವೆ ಮಂಟಪದಲ್ಲಿ ಪರಸ್ಪರ ಹಾರ ಬದಲಾಯಿಸುವಾಗ ವಧುವಿನ ಕೊರಳು ಮತ್ತು ಕಿವಿಗೆ ವರನ ಕೈ ತಾಗಿದ್ದನ್ನೇ ನೆಪ ಮಾಡಿಕೊಂಡು ವಧು ಸಿಟ್ಟಾದಳು. ಹಿರಿಯರ ಮಾತುಕತೆ ಬಳಿಕ ಮದ್ವೆ ನಡೆಸಲು ಕುಟುಂಬಸ್ಥರು ಸಜ್ಜಾದರು. ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮತ್ತೆ ಸಿಟ್ಟಿಗೆದ್ದ ವಧು, ತಾಳಿ ಸಹಿತ ಹೂವಿನ ಹಾರವನ್ನು ಎಸೆದು ಈ ಮದುವೆಯೇ ಬೇಡ ಎಂದಳು.
ಬಳಿಕ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಸ್ಥಳಕ್ಕಾಗಮಿಸಿದ ವೇಣೂರು ಪೊಲೀಸರು ಮಾತುಕತೆ ನಡೆಸಿದರು.ಆದರೆ ನಿಶ್ಚಿತಾರ್ಥ ಸಂದರ್ಭ ಬಂದಿದ್ದ ವರನೇ ಬೇರೆ, ಹೆಣ್ಣು ನೋಡಲು ಬಂದವನೇ ಬೇರೆ, ಈಗ ಮದುವೆ ಆಗುತ್ತಿರುವವನೇ ಬೇರೆ. ಮೂರು ಬಾರಿಯೂ ಬಂದದ್ದು ಬೇರೆ ಬೇರೆ. ಇದೇ ಕಾರಣಕ್ಕೆ ವಧು ಮದುವೆಯನ್ನ ತಿರಸ್ಕರಿಸಲು ಮುಖ್ಯ ಕಾರಣ ಎಂದು ಆರೋಪಿಸುವ ಮೂಲಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ