ಕುಂದಾಪುರ: ಕೋಟೇಶ್ವರದ ಅಂಕದಕಟ್ಟೆ ಎಂಬಲ್ಲಿ ಗುರುವಾರ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಉದ್ಯಮಿ ಮೊಳಹಳ್ಳಿ ಗಣೇಶ ಶೆಟ್ಟಿಯವರನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ.
ಮೃತರ ಪುತ್ರ ಸುಧೀಂದ್ರ ಕಟ್ಟೆ ತಂದೆಯ ಸಾವಿಗೆ ಮೊಳಹಳ್ಳಿ ಗಣೇಶ ಶೆಟ್ಟಿ ಮತ್ತು ಬ್ರೊಕರ್ ಇಸ್ಮಾಯಿಲ್ ಅವರ ಪ್ರಚೋದನೆಯೇ ಕಾರಣ ಎಂದು ದೂರು ನೀಡಿದ್ದು ಸೆಕ್ಷನ್ 306 ಪ್ರಕಾರ ಪ್ರಕರಣ ದಾಖಲಾಗಿತ್ತು. ಪ್ರಕರಣ ಅರೋಪಿಗಳ ಪ್ಯೆಕಿ ಗಣೇಶ ಶೆಟ್ಟಿ ಬಂಧಿಸಲ್ಪಟ್ಟಿದ್ದು ಇನ್ನು ಇಸ್ಮಾಯಿಲ್ ಬಂಧನಕ್ಕೆ ಬಲೆಬೀಸಲಾಗಿದೆ.
ಬಂಧಿತ ಆರೋಪಿಯನ್ನು ಶುಕ್ರವಾರ ರಾತ್ರಿ ಮ್ಯಾಜಿಸ್ಟ್ರೇಟ್ ಮನೆ ಮುಂದೆ ಹಾಜರುಪಡಿಸಲಾಗಿದ್ದು. ಅರೋಪಿಯ ಪರ ವಕೀಲರು ಆರೋಪಿಗೆ ಚಿಕಿತ್ಸೆಯ ಅಗತ್ಯವಿರುವುದಾಗಿ ವಿನಂತಿಸಿದ ಮೇರೆಗೆ, ಮೇ 30 ರ ತನಕ ಆರೋಪಿಯನ್ನು ಅಸ್ಪತ್ರೆಗೆ ದಾಖಲಿಸಲು ಆದೇಶಿಸಿರುತ್ತಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ