ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ ನ ಏಳು ಸ್ಥಾನಗಳ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ . 7 ಸ್ಥಾನಗಳ ಪೈಕಿ ಬಿಜೆಪಿಗೆ 4 , ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದಕ್ಕಿದೆ . ದಿನಾಂಕ 03-06-2022 ರಂದು ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ವಿಶಾಲಾಕ್ಷಿ ಅವರು ಇಂದು ಘೋಷಿಸಿದರು .
ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು , 25 ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು . ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳನ್ನ ಬಿಟ್ಟು ಬೇರೆ ಯಾರು ಸ್ಪರ್ಧೆ ಮಾಡಿಲ್ಲ . ಈ ಹಿನ್ನೆಲೆಯಲ್ಲಿ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣಕ್ಕೆ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ .
ಬಿಜೆಪಿಯಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ , ಟಿ . ನಾರಾಯಣಸ್ವಾಮಿ , ಹೇಮಾಲತಾ ನಾಯಕ ಹಾಗೂ ಎಸ್ . ಕೇಶವ ಪ್ರಸಾದ್ ಆಯ್ಕೆಯಾಗಿದ್ರೆ , ಕಾಂಗ್ರೆಸ್‌ನಿಂದ ಕೆ.ಅಬ್ದುಲ್ ಜಬ್ಬಾರ್ ಹಾಗೂ ಎಂ . ನಾಗರಾಜ್ ಯಾದವ್ ಆಯ್ಕೆಯಾಗಿದ್ದಾರೆ . ಇನ್ನು ಒಂದು ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ಶರವಣನ್ . ಟಿ ಅವರು ಅವಿರೋಧವಾಗಿ ವಿಧಾನಪರಿಷತ್‌ಗೆ ಆಯ್ಕೆಯಾದರು . ಇಂದು ನಾಮಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯ್ತು .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ