ಮಂಗಳೂರು : ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಲ್ಲಿ ಭಟ್ಕಳ ಮೂಲದ ಓರ್ವನನ್ನು ಮಂಗಳೂರು ಅಂತರ್ ರಾಷ್ಟ್ರಿಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನಿಂದ ಸುಮಾರು 29.12 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದುಬೈನಿಂದ ಸ್ಟೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಭಟ್ಕಳ ಮೂಲದ ವ್ಯಕ್ತಿಯನ್ನು ಅನುಮಾನದ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಆತನ ಗುದದ್ವಾರದಲ್ಲಿ 3 ಅಂಡಾಕಾರದಲ್ಲಿ ಗಮ್ ನೊಂದಿಗೆ ಅಂಟಿಸಿ ಇಡಲಾಗಿದ್ದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ