ಮಂಗಳೂರು ಮಳಲಿ ಮಸೀದಿ ವಿವಾದ ವಿಚಾರದಲ್ಲಿ ಮಳಲಿಯ ಅಸಯ್ಯದ್ ಅಬ್ದುಲ್ಲಾಹಿಲ್ ಮದನಿ ಮಸೀದಿ ಆಡಳಿತದಿಂದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ .
ವಿಶ್ವಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡುವಂತೆ ಮಸೀದಿ ಆಡಳಿತ ಮಂಗಳೂರು ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ .
ವಕ್ಸ್ ಬೋರ್ಡ್ ಕಾಯ್ದೆ ಮತ್ತು 1991 ರ ಪೂಜಾ ಸ್ಥಳಗಳ ಕಾಯ್ದೆಯಡಿ ವಜಾ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದ್ದು , ಮೇ 31 ರಂದು ಅರ್ಜಿ ಸಂಬಂಧ ವಿಚಾರಣೆ ನಿಗದಿಯಾಗಿದೆ .
ತಾಂತ್ರಿಕ ಕಾರಣ ನೀಡಿ ಮಸೀದಿ ಆಡಳಿತ ಅರ್ಜಿ ಸಲ್ಲಿಕೆ ಮಾಡಿದ್ದು , ವಕ್ಸ್ ಆಸ್ತಿಯಾಗಿರುವ ಕಾರಣದಿಂದ ಹಿಂದೂ ಸಂಘಟನೆಗಳ ಅರ್ಜಿಯನ್ನು ವಜಾ ಮಾಡುವಂತೆ ಕೋರ್ಟ್ ಮೊರೆ ಹೋಗಲಾಗಿದೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ