ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲಾ-ಕಾಲೇಜುಗಳಲ್ಲಿ ಯೋಗ ಪಠ್ಯಕ್ರಮ ಆರಂಭ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ಎಸ್. ವ್ಯಾಸ ವಿಶ್ವವಿದ್ಯಾನಿಲಯದಲ್ಲಿ ಆರೋಗ್ಯ ತಂತ್ರಜ್ಞಾನ ಕುರಿತ ಆಯು ಆಪ್ ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಕೋವಿಡ್ ನಿಂದಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಮೇಲೆ ಒತ್ತಡ ಹೆಚ್ಚಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಒತ್ತಡರಹಿತರಾಗಿ ವಿದ್ಯಾಭ್ಯಾಸ ಮಾಡುವ ವಾತಾವರಣ ನಿರ್ಮಾಣವಾಗಬೇಕಿರುವ ಕಾರಣ ಪ್ರೌಢ ಮತ್ತು ಕಾಲೇಜುಗಳಲ್ಲಿ ಯೋಗಾಭ್ಯಾಸ ಆರಂಭ ಮಾಡುತ್ತೇವೆ ಎಂದರು.
ಮುಂಬರುವ ಶೈಕ್ಷಣಿಕ ವರ್ಷದಿಂದ ಪ್ರೌಢ, ಕಾಲೇಜು ಹಂತದಲ್ಲಿ ಯೋಗಾಭ್ಯಾಸ ತರಗತಿಗಳು ಪ್ರಾರಂಭವಾಗಲಿದ್ದು, ಈ ಬಗ್ಗೆ ಪರಿಣಿತರೊಂದಿಗೆ ಚರ್ಚೆ ಮಾಡಿದ ಬಳಿಕ ಯೋಗ ಪಠ್ಯಕ್ರಮ ಸಿದ್ಧಪಡಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ