ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಭಾರೀ ಸುದ್ದಿಯಾದ ಉಪ್ಪಿನಕುದ್ರು ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಪ್ರಚೋದನೆ ನೀಡಿದ ಆರೋಪಿಗಳ ಪೈಕಿ ಅಝೀಝ್ ಎಂಬಾತನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿಲ್ಪಾ ಅಜೀಜ್ ಎಂಬಾತನ ಜವಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಅಜೀಜ್ ಕೆಲಸದ ವೇಳೆ ಪುಸಲಾಯಿಸಿ ಶಿಲ್ಪಾ ಜೊತೆ ಸ್ನೇಹ ಬೆಳೆಸಿಕೊಂಡಿದ್ದ.
ಅಜೀಜ್ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿಕೊಂಡಿದ್ದ. ಬಳಿಕ ಮತಾಂತರವಾಗಿ ಮದುವೆ ಮಾಡುಕೊಳ್ಳುವಂತೆ ಶಿಲ್ಪಾಗೆ ಒತ್ತಾಯ ಮಾಡಿದ್ದು ಇದರ ಬೆನ್ನಲ್ಲೇ ಶಿಲ್ಪಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಫಲಿಸದೆ ಶಿಲ್ಪಾ ಸಾವನ್ನಪ್ಪಿದ್ದಳು.
ಶಿಲ್ಪಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅಝೀಜ್ ಮತ್ತು ಆತನ ಪತ್ನಿ ಸಲ್ಮಾ ವಿರುದ್ದ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು.
ಪೊಲೀಸರು ಆರೋಪಿ ಅಝೀಜ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ