ಚಿಕ್ಕಮಗಳೂರು: ದತ್ತಪೀಠ ಹೋರಾಟದ ವಿಚಾರದಲ್ಲಿ ಅಂದಿನಿಂದ ಇಂದಿನವರೆಗೂ ಕೂಡ ನಾನೊಬ್ಬ ಹೋರಾಟಗಾರ ದತ್ತಪೀಠ ಹಿಂದೂಗಳ ಪೀಠವಾಗಬೇಕೆಂಬ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಇಂಧನ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಶೃಂಗೇರಿ ಶಾರದಾಂಬೆ ದರ್ಶನ ಪಡೆದು, ಮಾಧ್ಯಮದ ಜೊತೆ ಮಾತನಾಡಿದ ಅವರು, ಅಂದು-ಇಂದು ನಾನೊಬ್ಬ ದತ್ತಪೀಠದ ಹೋರಾಟಗಾರ. ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಕಾನೂನು ತಜ್ಞರ ಸಲಹೆಯಂತೆ ಅಗತ್ಯ ಕ್ರಮಗಳನ್ನ ಕೈಗೊಂಡು, ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಹಾಗೂ ನಮ್ಮ ಪರಂಪರೆಯಂತೆ ಪೂಜೆ-ಪುನಸ್ಕಾರಗಳು ನಡೆಯುವ ರೀತಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ದತ್ತಪೀಠದ ವಿಚಾರದಲ್ಲಿ ಸರ್ಕಾರದ ಮಟ್ಟದಲ್ಲಿ ಕಾನೂನಿನನ್ವಯ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನ ಬಿಜೆಪಿ ಸರ್ಕಾರ ಕೈಗೊಂಡಿದೆ. ದತ್ತಪೀಠ ಹಿಂದೂಗಳದ್ದಾಗಬೇಕು ಎಂದು ಅನೇಕ ವರ್ಷಗಳಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ಶೀಘ್ರವೇ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಹಾಗೂ ಪೂಜೆ ನಡೆಯಲಿದೆ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ