Slider


ಕೇರಳದಲ್ಲಿ ಮಕ್ಕಳಿಗೆ ಟೊಮೆಟೋ ಜ್ವರ:-80ಕ್ಕೂ ಹೆಚ್ಚು ಕೇಸ್ ಪತ್ತೆ 12-5-2022

 


ಈಗಲೂ ದೇಶದಲ್ಲಿ ಅತಿಹೆಚ್ಚು ಕೋವಿಡ್‌ ಸೋಂಕು ಮತ್ತು ಸಾವು ದಾಖಲಾಗುತ್ತಿರುವ ಕೇರಳದಲ್ಲಿ ಇದೀಗ ಟೊಮೆಟೊ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ 5 ವರ್ಷಕ್ಕಿಂತ ಚಿಕ್ಕ ವಯಸ್ಸಿನ 80 ಮಕ್ಕಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಪೋಷಕರಲ್ಲಿ ಆತಂಕ ಮನೆ ಮಾಡಿದೆ.




ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ವೈರಾಣು ಜ್ವರವಾದ ಇದು ಹೇಗೆ ಸೃಷ್ಟಿಯಾಗಿದೆ, ಕಾರಣ ಏನು? ಎಂಬ ಮಾಹಿತಿ ಇಲ್ಲ. ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಆದರೆ ಆತಂಕ ಪಡುವ ಅಗತ್ಯವಿಲ್ಲ. ಇದು ಮಾರಣಾಂತಿಕವಲ್ಲ. ಸೂಕ್ತ ಚಕಿತ್ಸೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಂಡು ರೋಗದಿಂದ ರಕ್ಷಣೆ ಪಡೆಯಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.




ಇದೊಂದು ಅಪರೂಪದ ವೈರಲ್‌ ಜ್ವರವಾಗಿದ್ದು, ಮೈ ಮೇಲೆ ದದ್ದು (ರಾರ‍ಯಷಸ್‌), ಚರ್ಮದ ಉರಿ ಮತ್ತು ನಿರ್ಜಲೀಕರಣದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ದದ್ದುಗಳು ಕೆಂಪನೆಯ ಬಣ್ಣವಿದ್ದು, ಟೊಮೆಟೊಗೆ ಹೋಲುವ ಕಾರಣ, ಇದಕ್ಕೆ ಟೊಮೆಟೊ ಜ್ವರವೆಂದು ಹೆಸರು ಇದೆ. ಜ್ವರ ಕಾಣಿಸಿಕೊಂಡವರಲ್ಲಿ ಟೊಮೆಟೊ ರೀತಿಯ ಗುಳ್ಳೆ, ಜ್ವರ, ಮೈಕೈ ನೋವು, ಸಂಧುಗಳಲ್ಲಿ ನೋವು, ಆಯಾಸ, ಬಳಲಿಕೆ ಕಾಣಿಸಿಕೊಳ್ಳುತ್ತದೆ. ಇದುವರೆಗೆ ಪತ್ತೆಯಾದ ಎಲ್ಲಾ 80 ಪ್ರಕರಣಗಳು ಕೇವಲ ಕೊಲ್ಲಂ ಜಿಲ್ಲೆಯೊಂದರಲ್ಲೇ ಕಾಣಿಸಿಕೊಂಡಿದೆ.


ಕಟ್ಟೆಚ್ಚರ:

ಕೇರಳದಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೇರಳದಿಂದ ತಮಿಳುನಾಡಿಗೆ ಪ್ರವೇಶಿಸುವವರ ಮೇಲೆ ಗಡಿ ಭಾಗದಲ್ಲಿ ತೀವ್ರ ನಿಗಾ ಇಡಲಾಗಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo