ಬ್ರಹ್ಮಾವರ : ಹೊಟೇಲ್ ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಮನನೊಂದ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಕಾಡಿ ಗ್ರಾಮದ ಗಾಂಧಿ ನಗರ ಎಂಬಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಗಾಂಧಿ ನಗರ ನಿವಾಸಿ ಪ್ರಭಾಕರ ಶೆಟ್ಟಿಗಾರ್ ಎಂಬವರ ಪುತ್ರ ಪೃಥ್ವಿರಾಜ್(27) ಎಂದು ಗುರುತಿಸಲಾಗಿದೆ.
ಇವರು ಸುಮಾರು ಒಂದೂವರೆ ವರ್ಷದ ಹಿಂದೆ ಹಾಸನದಲ್ಲಿ ಸುಮಾರು 14 ಲಕ್ಷ ಖರ್ಚು ಮಾಡಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಆದರೆ ಹೊಟೇಲ್ ವ್ಯವಹಾರದಲ್ಲಿ ನಷ್ಟ ಉಂಟಾಗಿ, ಕಳೆದ 6 ತಿಂಗಳಿಂದ ಮನೆಯಲ್ಲಿಯೇ ಇದ್ದು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದರು.
ವ್ಯವಹಾರದಲ್ಲಿನ ನಷ್ಟದಿಂದ ಖಿನ್ನತೆಗೆ ಒಳಗಾಗಿ ಮನನೊಂದ ಇವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ