ಮಂಗಳೂರು: ವಿದೇಶಕ್ಕೆ ಹೋಗಲು ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ದರೋಡೆಗೈದ ಘಟನೆ ಮಂಗಳೂರಿನ ಕಂದಾವರದಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೊತೆಗೆ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ನಾರೀಝ್(30), ನೌಶದ್(32), ಅಕ್ಬರ್ (40) ಎಂದು ಗುರುತಿಸಲಾಗಿದೆ.
ಅಬ್ದುಲ್ ರೆಹಮಾನ್ ಎಂಬುವವರು ಸೋಮವಾರ ಮುಂಜಾನೆ ಮಸ್ಕತ್ ಗೆ ತೆರಳಲು ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ 5ಮಂದಿಯ ಗುಂಪೊಂದು ಕಾರಿನಲ್ಲಿ ಬಂದು ಅಡ್ಡಗಟ್ಟಿ ಅಬ್ದುಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಅಬ್ದುಲ್ ಅವರ ಹಣ, ಮೊಬೈಲ್ ಮತ್ತು ಪಾಸ್ ಪೋರ್ಟ್ ಇರುವ ಸೂಟ್ ಕೇಸ್ ಅನ್ನು ದರೋಡೆ ಮಾಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ