ಉಡುಪಿ ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ ಖ್ಯಾತ ಆಧ್ಯಾತ್ಮಿಕ ಚಿಂತಕ ಶ್ರೀ ಶ್ರೀ ರಮಾನಂದ ಗುರೂಜಿ ಅವರು ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ .
ಧಾರ್ಮಿಕ ಕ್ಷೇತ್ರದಲ್ಲಿನ ವಿಶೇಷ ಸಾಧನೆಗಾಗಿ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ರಿಜಿಸ್ಟರ್ಡ್ ಇದರ
47ನೇ ವಾರ್ಷಿಕ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು .
ಮೇ ತಿಂಗಳ ತಾರೀಖು ಇಪ್ಪತ್ತೈದರ ಬುಧವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟೀಸ್ ಅರಳಿ ನಾಗರಾಜ್ ಉದ್ಘಾಟಿಸಲಿರುವರು .
ಡಾಕ್ಟರ್ ಎಚ್ ಎಲ್ ಎನ್ ರಾವ್ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ನಾಡೋಜ ಡಾಕ್ಟರ್ ಮಹೇಶ್ ಜೋಷಿ ಹಾಗೂ ಖ್ಯಾತ ಕನ್ನಡ ಚಲನಚಿತ್ರ ನಟಿ ಹಾಗೂ ಪದ್ಮಶ್ರೀ ಪುರಸ್ಕೃತ ಶ್ರೀಮತಿ ಭಾರತಿ ವಿಷ್ಣುವರ್ಧನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರತಿಷ್ಠಿತರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ