ಹುಬ್ಬಳ್ಳಿ :-ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ಕಾರ್ಯಕರ್ತರು ಪ್ರಚೋದನಾತ್ಮಕ ಘೋಷಣೆ ಕೂಗುತ್ತ ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರ ಕಾನೂನಾತ್ಮಕವಾಗಿ ಪರಿಶೀಲಿಸಿ ಈ ಸಂಘಟನೆಗಳು ನಿಷೇಧಕ್ಕೆ ಕ್ರಮ ಕೈಗೊಳ್ಳಲಿವೆ ಎಂದರು.
ಇನ್ನು ಸಿದ್ದರಾಮಯ್ಯನವರು ಆರ್ ಎಸ್‌ಎಸ್ ಮೂಲದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಸರಿಯಾದ ಮೂಲ ಸ್ಥಾನವಿಲ್ಲ, ಆದರೆ ಆರ್‌ಎಸ್‌ಎಸ್ ಮೂಲ ಕೆದುಕುತ್ತಾರೆ. ತುಷ್ಟೀಕರಣ ರಾಜಕಾರಣ ಮಾಡುತ್ತಾರೆ, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗೆ ಸದಾ ಕುಮ್ಮಕ್ಕು ನೀಡುತ್ತಾ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ