Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಕಡಿಯಾಳಿ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 1-6-2022

 


ಉಡುಪಿ : ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಕಡಿಯಾಳಿಯಲ್ಲಿರುವ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ .



 ಅನಂತರ ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳಲ್ಲಿ ನಾಲ್ಕು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಸಿಎಂ , ಕಾರ್ಕಳದ ಎಣ್ಣೆಹೊಳೆ ಏತ ನೀರಾವರಿ ಯೋಜನೆ , ಹೆಬ್ರಿ ತಾಲೂಕು ಆಡಳಿತ ಸೌಧ , ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉದ್ಘಾಟಿಸಿ ಹೆಬ್ರಿ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ . 



ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ . ಸುನೀಲ್ ಕುಮಾರ್ ಮತಕ್ಷೇತ್ರದಲ್ಲಿ ಈ ವಿವಿಧ ಕಾರ್ಯಕ್ರಮಗಳು ನಡೆಯಲಿವೆ . ಅಪರಾಹ್ನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಲಿರುವ ಸಿಎಂ , ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ . 







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo