ಉಡುಪಿ : ಉಡುಪಿ ಜಿಲ್ಲಾ ಪ್ರವಾಸದಲ್ಲಿ ಇರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿಯಲ್ಲಿರುವ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು .
ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸುತ್ತು ಪೌಳಿಯನ್ನು ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು .
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ . ಅಂಗಾರ , ಸಚಿವರಾದ ಆರ್ . ಅಶೋಕ್ , ಗೋವಿಂದ ಕಾರಜೋಳ , ವಿ . ಸುನಿಲ್ ಕುಮಾರ್ , ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ರಘುಪತಿ ಭಟ್ ಸೇರಿದಂತೆ ಇನ್ನಿತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ