ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿದು ಬಂದಿದೆ.
ಕರ್ನಾಟಕ ರಾಜ್ಯ ಸೇರಿದಂತೆ ಕೇರಳ, ಪುದುಚೇರಿ, ಗೋವಾ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಲಿದ್ದು, ಜೂನ್ 13ರ ವರೆಗೂ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿಯಿಂದ ತಿಳಿಯಲಾಗಿದೆ.
ಜೂನ್ 9 ರಿಂದ 13ರ ವರೆಗೆ ಈಶಾನ್ಯ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದು, ಜೂನ್ 10 ರಿಂದ 13ರ ವರೆಗೆ ಗೋವಾದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಮಲೆನಾಡು,ಕರಾವಳಿ ಸೇರಿದಂತೆ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ