Slider


ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ; ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ‌‌‌‌‌10-6-2022ಗ

 


ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.





ಶಾಪಿಂಗ್ ಮಾಲ್ , ಮಾರುಕಟ್ಟೆ, ರೆಸ್ಟೋರೆಂಟ್, ಪಬ್‌ಗಳು, ಶಿಕ್ಷಣ ಸಂಸ್ಥೆಗಳು, ಹಾಸ್ಟಲ್‌ಗಳು, ಕಚೇರಿ ಕಾರ್ಖಾನೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು ಸಾರ್ವಜನಿಕರು ಸಹಕಾರವನ್ನು ನೀಡಬೇಕೆಂದು ಸರ್ಕಾರ ಕೋರಿದೆ.ಸ್ವಂತ ವಾಹನ ಮತ್ತು ಸಾರ್ವಜನಿಕ ಸಾರಿಗೆ ಸಂಸ್ಥೆಗಳಾದ ಬಸ್‌ ಮತ್ತು ರೈಲುಗಳಲ್ಲಿ ಪ್ರಯಾಣಿಸುವ ಸಂಧರ್ಭದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.



ILI and SARI ಲಕ್ಷಣಗಳನ್ನು ಹೊಂದಿರುವ, ಹೈರಿಸ್ಕ್ ಗುಂಪಿನವರು ಮತ್ತು ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಆದ್ಯತೆ ಮೇರೆಗೆ ಪರೀಕ್ಷೆಗೆ ಒಳಪಡುವುದು ಮತ್ತು ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕ ಎಂದು ಹೊಸ ಮಾರ್ಗ ಸೂಚಿಯಲ್ಲಿ ತಿಳಿಸಿದೆ.


ರಾಜ್ಯ ಸರ್ಕಾರ ಮಾಸ್ಕ್ ಅನ್ನು ಕಡ್ಡಾಯ ಮಾಡಿ ಮತ್ತೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವುದರಿಂದ ಮಾರ್ಷಲ್ ಫೈನ್ ಪರ್ವ ಮತ್ತೆ ಶುರುವಾಗುತ್ತಾ ಅನ್ನೋ ಪ್ರಶ್ನೆ ಮಾಡಿದೆ. ಸರ್ಕಾರ ಅರ್ಹರು ಬೂಸ್ಟರ್ ಡೋಸ್ ಅನ್ನು ಪಡೆಯಲಿ ಎಂಬ ಸಲಹೆಯನ್ನು ನೀಡಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo