ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿಯ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಣಕ್ಕೆ ಇಳಿಸಿದ್ದಂತ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಇಂದು ರಾಜ್ಯಸಭೆ ಚುನಾವಣೆಗೆ ಮತದಾನ ನಡೆದು, ಮತಏಣಿಕೆ ಕಾರ್ಯ ಅಂತಿಮ ಹಂತವನ್ನು ತಲುಪಿದೆ. ಬಿಜೆಪಿಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನಿರ್ಮಲಾ ಸೀತಾರಾಮನ್ 46 ಮತ, ನಟ ಜಗ್ಗೇಶ್ 44 ಹಾಗೂ ಲೇಹರ್ ಸಿಂಗ್ 33 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇನ್ನೂ ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದಂತ ಮೊದಲ ಅಭ್ಯರ್ಥಿ ಜೈರಾಂ ರಮೇಶ್ 46 ಮತಗಳನ್ನು ಪಡೆದು ಗೆಲುವು ಸಾಧಿಸಿದ್ರೇ.. ಎರಡನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಂತ ಮನ್ಸೂರ್ ಆಲಿ ಖಾನ್ 25 ಮತ ಪಡೆದು ಸೋಲು ಕಂಡಿದ್ದಾರೆ.
ಜೆಡಿಎಸ್ ನಿಂದ ಕಣಕ್ಕೆ ಇಳಿದಿದ್ದಂತ ಕುಪೇಂದ್ರ ರೆಡ್ಡಿ 30 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಈ ಮೂಲಕ ಬಿಜೆಪಿ ಮೂರು ಸ್ಥಾನ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲುವು ಕಂಡರೇ.. ಜೆಡಿಎಸ್ ಪಕ್ಷದ ಅಭ್ಯರ್ಥಿ ಸೋತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ