ಮಂಗಳೂರು : ರೌಡಿ ಶೀಟರ್ ರಾಜಾಕೊಲೆ ಪ್ರಕರಣದ ಆರೋಪಿಗಳ ಬಂಧನ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಪದ್ಮನ್ನೂರು ಬಳಿ ನಡೆದಿದೆ.
ಕಳೆದ ಸೋಮವಾರ ರಾತ್ರಿ ಬೈಕಂಪಾಡಿ ಸಮೀಪದ ಮೀನಕಳಿ ಬಳಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಬಿಂದಾಸ್ ಮನೋಜ್ ನನ್ನು ಪೊಲೀಸರು ಬಂಧಿಸಿದ್ದರು. ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಇನ್ನಷ್ಟು ಆರೋಪಿಗಳ ಬಂಧನಕ್ಕೆ ಕೊಂಡೊಯ್ಯುವ ವೇಳೆ ಈ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮೂರು ಸುತ್ತು ಫೈರಿಂಗ್ ನಡೆಸಿದ್ದು, ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ. ಘಟನೆಯಲ್ಲಿ ಪಿಎಸ್ ಐ ನಾಗೇಂದ್ರ, ಎಎಸ್ ಐ ಡೇವಿಡ್, ಎಎಚ್ ಸಿ ಸಂತೋಷ್ ಪೂಜಾರಿ ಗಾಯಗೊಂಡಿದ್ದಾರೆ.
ಕೊಲೆ ಯತ್ನ ಸಹಿತ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಕುಳಾಯಿಯ ರಾಜಾ ಯಾನೆ ರಾಘವೇಂದ್ರ ಕಳೆದ ಸೋಮವಾರ ರಾತ್ರಿ 7.30ರ ಸುಮಾರಿಗೆ ಬೈಕಂಪಾಡಿ ಬಳಿಯಿಂದ ಮೀನಕಳಿಯ ರಸ್ತೆಯಾಗಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ, ತಲವಾರು ಮತ್ತು ಚಾಕುವಿನಿಂದ ಮುಖ, ತಲೆ, ಕೈಗೆ ಹೊಡೆದಿದ್ದು, ರಾಜಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಬಿದ್ದಿದ್ದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು ರಾಜಾನನ್ನು ಆಸ್ಪತ್ರೆಗೆ ದಾಖಲಿಸಿದ್ದರಾದರೂ. ರಾಜಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ