Slider


ಬ್ರಹ್ಮಾವರ:-ಅಪಘಾತದಲ್ಲಿ ಗಾಯಗೊಂಡು ಮೆದುಳು ‌‌‌‌‌‌‌ನಿಷ್ಕ್ರಿಯಗೊಂಯುವಕನ ಅಂಗಾಂಗ ದಾನ 12-6-2022

 


ಉಡುಪಿ : ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಬಳಿ ಜೂನ್. 08 ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ ನವೀನ ಅವರ ಅಂಗಾಗ ದಾನ ಮಾಡುವ ಮೂಲಕ 6 ಜನರ ಜೀವ ಉಳಿಸಿ ಸಾವಿನಲ್ಲು ಸಾರ್ಥಕತೆ ಮೆರೆದಿದ್ದಾರೆ.



ಅಪಘಾತದಲ್ಲಿ ಗಂಭೀರ ಗಾಯಗೊಂಡ ನವೀನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ನವೀನ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ತಂಡವು ನಿನ್ನೆ ನವೀನ್ ಅವರ ಮೆದುಳು ನಿಷ್ಕ್ರಿಯ ಗೊಂಡಿರುವುದಾಗಿ ಘೋಷಿಸಿದ್ದರು. 


ಈ ವೇಳೆ ನವೀನ್ ಅವರ ಕುಟುಂಬದ ಸದಸ್ಯರು ಅಂಗಾಗ ದಾನಕ್ಕೆ ಇಚ್ಚೆ ವ್ಯಕ್ತಪಡಿಸಿದ್ದರು. ಅದರಂತೆ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳನ್ನು 6 ಜನರ ಜೀವ ಉಳಿಸಲು ದಾನ ಮಾಡಲಾಯಿತು.



ನೋಂದಾಯಿತ ರೋಗಿಗಳಿಗೆ ಎರಡು ಕಾರ್ನಿಯಾಗಳು ಮತ್ತು ಒಂದು ಮೂತ್ರಪಿಂಡ ಮತ್ತು ಚರ್ಮವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು. ಯಕೃತ್ತು ಮತ್ತು ಒಂದು ಕಿಡ್ನಿಯನ್ನು ಕೆಎಂಸಿ ಆಸ್ಪತ್ರೆ ಅಂಬೇಡ್ಕರ್ ಸರ್ಕಲ್ ಮಂಗಳೂರಿಗೆ ಕಳುಹಿಸಿಕೊಡಲಾಯಿತು. 



ಈ ಕುರಿತು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ “ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು ಅತ್ಯಂತ ಮಹತ್ವವನ್ನು ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು”, “ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಲ್ಲಿ ದಿನದಿಂದ ದಿನಕ್ಕೆ ಜಾಗೃತಿ ಹೆಚ್ಚಾಗುತ್ತಿರುವುದು ಒಳ್ಳೆಯ ಸಂಗತಿ.” ಎಂದು ಅಭಿಪ್ರಾಯಪಟ್ಟರು. ಹಾಗೂ ಅಂಗ ದಾನ ಮಾಡಲು ನಿರ್ಧರಿಸಿದ ಶ್ರೀನಿವಾಸ್ ಕುಟುಂಬಕ್ಕೆ ಕ್ರತಜ್ಞತೆ ಸಲ್ಲಿಸಿದರು.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo