Slider


*ಇನ್ನು ಡಿಗ್ರಿ, ಪಿಜಿ ಕೋರ್ಸ್ ಗಳಿಗೆ ಆನ್ ಲೈನ್ ಮೂಲಕವೇ ಪ್ರವೇಶಾತಿ: ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಘೋಷಣೆ14-6-2022

 


ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ (2022-23) ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್ ಲೈನ್ ವಿಧಾನದ ಮೂಲಕವೇ ನಡೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.




ಈ ಬಗ್ಗೆ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಲೇಜು ಶಿಕ್ಷಣ ಇಲಾಖೆ , ವಿ.ವಿ.ಗಳು ಮತ್ತು ವಿವಿ ಕಾಲೇಜುಗಳು ಇದಕ್ಕಾಗಿ https://uucms.karnataka.gov.in/ ವಿಳಾಸವನ್ನು ತಮ್ಮ ವೆಬ್ ಸೈಟುಗಳಲ್ಲಿ ಲಿಂಕ್ ಮಾಡಿ, ಲಭ್ಯವಾಗುವಂತೆ ಮಾಡಬೇಕು. ಜತೆಗೆ ಎಲ್ಲ ಕಾಲೇಜುಗಳೂ ಪ್ರವೇಶಾತಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ ಸೈಟ್ ಗಳಲ್ಲಿ ಪ್ರಕಟಿಸಬೇಕು ಎಂದು ಅವರು ಸೂಚಿಸಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo