ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮೂಡುಬೆಟ್ಟುವಿನಲ್ಲಿ ನಡೆದಿದೆ.
ಮೂಡಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಮನೆಯಲ್ಲ ಹರಡಿದೆ. ಸಿಲಿಂಡರ್ ಗೆ ಬೆಂಕಿ ಹಿಡಿಯುತ್ತಿದ್ದಂತೆ ಮನೆಯವರು ಹೊರಗೆ ಓಡಿ ಹೋಗಿದ್ದು, ದೊಡ್ಡ ಅವಘಡ ತಪ್ಪಿದೆ.
ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ ಕೋಣೆಯ ಪಾತ್ರೆ, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ