ಮಲ್ಪೆ : ನಾಗರ ಹಾವು ಕಚ್ಚಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಿದಿಯೂರು ಗ್ರಾಮದ ಸುಧಾಕರ ಅಮೀನ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜೂ.8 ರಂದು ಸುಧಾಕರ ಅಮೀನ್ (55) ಅವರು ಮನೆಯ ಕೋಣೆಯಲ್ಲಿ ಕಪಾಟಿನ ಮೇಲೆ ಇಟ್ಟಿದ್ದ ಅಂಗಿಯನ್ನು ತೆಗೆಯಲು ಹೋದಾಗ ಕಪಾಟಿನ ಮೇಲೆ ಇದ್ದ ನಾಗರಹಾವು ಕಚ್ಚಿದೆ. ಕೂಡಲೇ ಸುಧಾಕರ ಅಮೀನ್ ರವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ (ಜೂ.13) ಮಧ್ಯಾಹ್ನದ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಅಕ್ಕ ವನಜ ಅಮೀನ್ ಎಂಬವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ