ತುಮಕೂರು ಜಿಲ್ಲೆ ತಿಪಟೂರಿನಲ್ಲಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ಮನೆಗೆ ನುಗ್ಗಿ ಬೆಂಕಿ ಹಚ್ಚಲು ಯತ್ನಿಸಿದ 15 ಮಂದಿ ಎನ್‌ಎಸ್ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಬಿ ಸಿ ನಾಗೇಶ್ ಮನೆಗೆ ನುಗ್ಗಿದ ಎನ್‌ಎಸ್ಯುಐ ಕಾರ್ಯಕರ್ತರು ದಾಳಿ ಮಾಡಿ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ. ಈ ಸಂಬಂಧ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ 15 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾರದ್ದೋ ಮನೆಗೆ ನುಗ್ಗಿ ಬೆಂಕಿ ಹಚ್ಚುವುದನ್ನು ನಾವು ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಪರಿಷ್ಕೃತ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕುವೆಂಪು ಅವರಿಗೆ ಅವಮಾನ ಮಾಡಿದ್ದಾರೆ. ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಿಪಟೂರಿನಲ್ಲಿ ಇರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಎನ್‌ಎಸ್ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಈ ವೇಳೆ ಬೆಂಕಿ ಹಚ್ಚುವ ಯತ್ನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ