ಕರ್ನಾಟಕ ಸರಕಾರದ ಮಹತ್ವಕಾಂಕ್ಷೆ ಯೋಜನೆಯಲ್ಲಿ ಒಂದಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮವು ದಿನಾಂಕ 18 ರಂದು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಪೇತ್ರಿ ಯುವಕ ಮಂಡಲ ವಠಾರದಲ್ಲಿ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದ್ದು.
ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎಂ ಕೂರ್ಮರಾವ್ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ರಘುಪತಿ ಭಟ್ ಭಾಗವಹಿಸಲಿದ್ದಾರೆ ಎಂದು ಬ್ರಹ್ಮಾವರ ತಹಸೀಲ್ದಾರರಾದ ರಾಜಶೇಖರ್ ಮೂರ್ತಿ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೇಖಾ ಭಟ್ ವಹಿಸಲಿದ್ದು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ರಘುಪತಿ ಭಟ್ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರತಕ್ಕಂತಹ ಪರಿಶಿಷ್ಟ ಪಂಗಡದವರ ಸಮೀಕ್ಷೆಯನ್ನು ಮಾಡಿ ಅವರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬರ್ತ್ ಸರ್ಟಿಫಿಕೇಟ್, ಹಾಗೂ ಸಾಮಾಜಿಕ ಭದ್ರತೆಗೆ ಯೋಜನೆ ಸಂಬಂಧಪಟ್ಟ ಆದೇಶಗಳು ಕಡ್ಡಾಯವಾಗಿ ಸಿಗುವಾಗೆ, ಮತ್ತು ಚೇರ್ಕಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ವರ್ಗದ ಜನರಿಗೆ ನೀಡಲಾದ ಸೌಲಭ್ಯದಲ್ಲಿ ಲೋಪದೋಷವಾಗಿದ್ದಲ್ಲಿ ಅದರ ಬಗ್ಗೆ ಸಾರ್ವಜನಿಕರಲ್ಲಿ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು.
ಬೆಳಿಗ್ಗೆ 10 ಗಂಟೆಗೆ ವಿನಾಯಕ ಯುವಕ ಮಂಡಲ ವಠಾರದಲ್ಲಿ ಕಾರ್ಯಕ್ರಮ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯದ ಮಹತ್ವವನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಸಮೀಕ್ಷೆ ಆಧಾರದ ಮೇಲೆ ಮಾಡಬೇಕಾದಂತ ಕೆಲಸಗಳನ್ನು ಪರಿಶೀಲನೆ ಮಾಡಲಿದ್ದಾರೆ.
> ಪರಿಶಿಷ್ಟ ಪಂಗಡ ಹಾಗೂ ಇತರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
> ಸಾರ್ವಜನಿಕರಿಂದ ಅಹವಾಲು ಸ್ವೀಕಾರ
>ಸಂಜೆ ಮಾನ್ಯ ಜಿಲ್ಲಾಧಿಕಾರಿಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೇರ್ಕಾಡಿ ಇದರಲ್ಲಿ ವಾಸ್ತವ್ಯ ಹೂಡಲಿದ್ದಾರೆ.
>ರಾತ್ರೆ 7 ರಿಂದ 8 ಗಂಟೆಯ ವರೆಗೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಚೇರ್ಕಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ 300ಕ್ಕೊ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಬ್ರಹ್ಮಾವರ ತಹಸೀಲ್ದಾರರಾದ ಮಾನ್ಯ ರಾಜಶೇಖರ್ ಮೂರ್ತಿಯವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಳದಲ್ಲಿ ಬಗೆಹರಿಯದ ಸಮಸ್ಯೆಗಳನ್ನು ಆದಷ್ಟು ಕಡ್ಡಾಯವಾಗಿ ಬಗೆಹರಿಸುವ ನಿಟ್ಟಿನಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಪ್ರಯತ್ನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿಗಳಾದ ಶ್ರೀಮತಿ ಶರ್ಮಿಳಾ,
ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್.,
ಚೇರ್ಕಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್, ಉಡುಪಿ ವೈಕುಂಠ ಬಾಳಿಗ ಕಾನೂನು ವಿದ್ಯಾಲಯ ಇದರ ಪ್ರಾಂಶುಪಾಲರು ಶ್ರೀಮತಿ ನಿರ್ಮಲ ಮೊದಲಾದವರು ಭಾಗವಹಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ