Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಯಾವುದೇ ಕಾರಣಕ್ಕೂ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ:-ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ19-6-2022

 


ನವದೆಹಲಿ: ಕೇಂದ್ರ ರಕ್ಷಣಾ ಸಚಿವಾಲಯ ತಂದಿರುವ ಭಾರತೀಯ ಮಿಲಿಟರಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ಮಿಲಿಟರಿ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಯ ಹಿರಿಯ ಅಧಿಕಾರಿಗಳು ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ವಿಷಯವನ್ನ ಪ್ರಸ್ತಾಪಿಸಿದರು. ಕೇಂದ್ರ ಸರ್ಕಾರ ಕಳೆದ ಜೂನ್ 14ರಂದು ಮಿಲಿಟರಿಯಲ್ಲಿ ಯುವಕರನ್ನು ನೇಮಕಾತಿ ಮಾಡುವ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತಂದಿದ್ದು, ವಾಯುಸೇನೆಗೆ ಜೂನ್ 24ರಂದು ನೇಮಕಾತಿ ಆರಂಭವಾಗಲಿದೆ.



ಅಗ್ನಿಪಥ ಯೋಜನೆ ಮಿಲಿಟರಿಗೆ ಸೇರುವ ಯುವಕರಿಗೆ ಮಾರಕವಾಗಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಬಿಹಾರ, ಪಶ್ಚಿಮ ಬಂಗಾಳ, ಹೈದರಾಬಾದ್, ಸಿಕಂದರಾಬಾದ್, ತೆಲಂಗಾಣ, ಪಂಜಾಬ್, ಕೇರಳ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರವಾಗಿದ್ದು ಸಾಕಷ್ಟು ಸಾವು ನೋವುಗಳು ಸಂಭವಿಸಿವೆ.


ಪ್ರತಿಭಟನೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ದೆಹಲಿಯಲ್ಲಿ ಭಾರತೀಯ ನೌಕಾಪಡೆ ಮತ್ತು ವಾಯುಪಡೆಯ ಅಧಿಕಾರಿಗಳೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅನಿಲ್ ಪುರಿ, ಅಗ್ನಿಪಥ್ ಯೋಜನೆಯನ್ನು ಏಕೆ ಹಿಂತೆಗೆದುಕೊಳ್ಳಬೇಕು. ದೇಶವನ್ನು ಯುವಶಕ್ತಿಯನ್ನಾಗಿಸಲು ಅದೊಂದೇ ಪ್ರಗತಿಪರ ಹೆಜ್ಜೆಯಾಗಿದೆ. ದೇಶದ ಭದ್ರತೆ ದೃಷ್ಟಿಯಿಂದ ಈ ಯೋಜನೆ ಮುಖ್ಯವಾಗಿದೆ. ನಮ್ಮ ದೇಶದ ಅತಿ ಎತ್ತರದ ಪ್ರದೇಶಗಳಲ್ಲಿ ನೇಮಕಗೊಂಡಿರುವ ಮಿಲಿಟರಿ ಸಿಬ್ಬಂದಿಗಳು ಅನಾರೋಗ್ಯ ಕಾರಣದಿಂದ ಎಷ್ಟು ಮಂದಿ ಸಾಯುತ್ತಾರೆ ಎಂದು ನಿಮಗೆ ಗೊತ್ತಿದೆಯೇ? ಅದರ ಬಗ್ಗೆ ತಿಳಿದುಕೊಳ್ಳಿ ಆಗ ನಿಮಗೆ ಮಿಲಿಟರಿಯಲ್ಲಿ ಯುವಕರ ಅಗತ್ಯ ಎಷ್ಟಿರುತ್ತದೆ ಎಂಬುದು ಗೊತ್ತಾಗುತ್ತದೆ ಎಂದರು.



ಮಿಲಿಟರಿ ಪಡೆಗೆ ಸೇರಲಿಚ್ಛಿಸುವ ಯುವಕರು ತಾವು ಪ್ರತಿಭಟನೆ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಶೇಕಡಾ 100ರಷ್ಟು ಪೊಲೀಸ್ ಪರಿಶೀಲನೆಯೊಂದಿಗೆ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo